ಸುಮಾರು 5 ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಮತ್ತು ರಷ್ಯಾ ನಡುವಿನ ಭೀಕರ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕ, ಉಕ್ರೇನ್ ಮತ್ತು ರಷ್ಯಾ ಮಧ್ಯೆ ಇಂದು ಅಬುಧಾಬಿಯಲ್ಲಿ ತ್ರಿಪಕ್ಷೀಯ ಶಾಂತಿ ಮಾತುಕತೆ ಪುನರಾರಂಭಗೊಳ್ಳುತ್ತಿದೆ. ಈ ವರ್ಷದ ಫೆಬ್ರವರಿ ತಿಂಗಳ ನಂತರ ಮೂರೂ ದೇಶಗಳ ನಡುವೆ ನಡೆಯುತ್ತಿರುವ ಮೊದಲ ಮಾತುಕತೆ ಇದಾಗಿದೆ.