ಲಕ್ನೋ: ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ(Noida) ತಡರಾತ್ರಿ ಪೊಲೀಸರಿಂದ ಎನ್‌ಕೌಂಟರ್ ನಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಪೊಲೀಸರ ಪ್ರತಿದಾಳಿಗೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.