ಉಡುಪಿ: ಕಸ್ತೂರ್ಬಾ ಮೆಡಿಕಲ್‌ ಆಸ್ಪತ್ರೆ (KMC) ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯೊಬ್ಬ ಕಟ್ಟಡದ ನಾಲ್ಕನೇ ಮಹಡಿಯಿಂದ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಗಾಯಗೊಂಡ ದುರ್ದೈವಿ.