ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ (Gruha Jyothi) ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್‌ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ (BESCOM) ವಿನಂತಿಸಿದೆ.