ಚಿತ್ರಮಂದಿರಗಳಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಬಿಡುಗಡೆ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಸದ್ಯಕ್ಕೆ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿಲ್ಲ. ಯಾಕೆ ತಡವಾಗುತ್ತಿದೆ ಎಂಬುದಕ್ಕೆ ನಿರ್ದೇಶಕ ಮನೋಜ್ ಕುಮಾರ್ ಅವರು ಟಿವಿ9 ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ.