ತುಮಕೂರು: ಕರ್ನಾಟಕ ಲೋಕಸೇವಾ ಆಯೋಗದ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಬಸವರಾಜ್‌ ಕನ್ನಾಳೆ ಅವರನ್ನು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಸ್ಥಾನದಿಂದ ವಜಾಮಾಡುವಂತೆ ಎಬಿವಿಪಿ ತುಮಕೂರು ಜಿಲ್ಲಾ ಘಟಕ ಆಗ್ರಹಿಸಿದೆ. ಈ ಸಂಬಂಧ ವಿಶ್ವವಿದ್ಯಾಲಯದ ಆವರಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ಪ್ರಭಾರ ಕುಲಪತಿಗೆ ಮನವಿ ಸಲ್ಲಿಸಿದ್ದರು.