ದೇಶಾದ್ಯಂತ ನಡೆಯುವ ಜನಗಣತಿಯಲ್ಲಿ ಇದುವರೆಗೆ ಕೇವಲ ಸರ್ಕಾರಿ ಶಾಲಾ ಶಿಕ್ಷಕರು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನ ಮಾತ್ರ ಗಣತಿದಾರರನ್ನಾಗಿ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನ ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲಾ ಶಿಕ್ಷಕರು ಜನಗಣತಿ ಕಾರ್ಯದಲ್ಲಿ ಭಾಗಿಯಾಗುವುದು ಕಡ್ಡಾಯವಾಗಲಿದೆ.