ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು(Jaguar Car) ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹಾಗೂ ಪೆಟ್ರೋಲ್ ಪಂಪ್ ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾದ ಭೀಕರ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ(Attibele Border) ನಡೆದಿದೆ.