ನವದೆಹಲಿ: ದೀಪಾವಳಿ ಹಿನ್ನೆಲೆ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ವಾಯುಮಾಲಿನ್ಯ ಪ್ರಮಾಣ ಏರಿಕೆಯಾಗಿತ್ತು. ಆದರೆ ಮಂಗಳವಾರ ಗಾಳಿಯ ವೇಗ ಹೆಚ್ಚಾದ ಹಿನ್ನೆಲೆಯಲ್ಲಿ ಮಾಲಿನ್ಯದ (Pollution) ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುವುದು ಸಾಮಾನ್ಯವಾಗಿದೆ.