ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ಸಂಸದರು ಮಂಗಳವಾರ ಬೆಳಗ್ಗೆ ಸಂಸತ್ ಭವನದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿಯಾದ ‘ನಿರ್ವಾಚನ್ ಸದನ’ದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದಾರೆ.