Dr Sudha Yadav: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 16) ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಧಾನಿ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅವರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ಅವರು ಪ್ರಮಾಣವಚನ ಬೋಧಿಸಿದರು.