ಚಿಕ್ಕೋಡಿ: ಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ನಡೆದಿದೆ. ಮಾಡಲಗಿ ಗ್ರಾಮದ ಕಲ್ಲವ್ವ ಮರಡಿ (55) ಕೊಲೆಯಾದ ದುರ್ದೈವಿ ಮಹಿಳೆ.