ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 92 ರನ್ ಗಳಿಸಿ ಶತಕ ವಂಚಿತರಾದರು. ಕೇವಲ 4 ರನ್​ಗೆ 2 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡವನ್ನು ಅವರು ತಾಳ್ಮೆಯ ಇನ್ನಿಂಗ್ಸ್ ಮೂಲಕ ಪಾರು ಮಾಡಿದರು. ರುತುರಾಜ್ ಜೊತೆಗೂಡಿ ಮೂರನೇ ವಿಕೆಟ್​ಗೆ ಶತಕದ ಜೊತೆಯಾಟ ನಿರ್ಮಿಸಿ ತಂಡಕ್ಕೆ ಆಧಾರವಾದರು.