ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಲಕ್ನೋದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್, 19.1 ಓವರ್​ಗಳಲ್ಲಿ 171 ರನ್​ಗಳಿಗೆ ಆಲೌಟ್ ಆಯಿತು. ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ, ಕೇವಲ 14.3 ಓವರ್​ಗಳಲ್ಲಿ ಪಂದ್ಯ ಮುಗಿಸಿದೆ.