ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದಕ್ಷಿಣ ಹಾಗೂ ಪೂರ್ವ ಭಾರತದ ಕರಾವಳಿ ರಾಜ್ಯಗಳಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಈ ಹವಾಮಾನ ವೈಪರೀತ್ಯ ಅರ್ನಾಬ್ ಚಂಡಮಾರುತ ಆಗಿ ಬದಲಾಗಲಿದ್ದು, ಅಕ್ಟೋಬರ್ 28 ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.