ಬೆಂಗಳೂರು: ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ. ನಿನ್ನೆ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.