ಶಿವಮೊಗ್ಗ: ಕೇಂದ್ರ ಸರ್ಕಾರದ ಉಡಾನ್ 6.0 (UDAN 6.0) ಯೋಜನೆಯ ಟೆಂಡರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು (Shivamogga Airport) ಸೇರ್ಪಡೆ ಮಾಡಲಾಗಿದೆ. ಶೀಘ್ರವೇ ವಿಮಾನ ಸೇವೆ ಪುನಾರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.