ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Tamil Nadu CM Vijay) ಅವರು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಸರ್ಕಾರಿ ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದ ಗರಿಷ್ಠ ವಯೋಮಿತಿಯನ್ನ 5 ವರ್ಷಗಳ ಕಾಲ ಸಡಿಲಿಕೆ (Age Relaxation) ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.