ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ 'ಉಚಿತ ಗ್ಯಾರಂಟಿ' ಯೋಜನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳಿಂದ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಪರಿಣಾಮವಾಗಿ ಬಸ್ ಟಿಕೆಟ್ ಹಾಗೂ ಹಾಲಿನ ದರಗಳು ಗಣನೀಯವಾಗಿ ಏರಿಕೆ ಮಾಡಲಾಗಿದೆ.