ಬೀದರ್: ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಸುದರ್ಶನ ರಟಕಲ್ ಕೊಲೆಯಾದ ಯುವಕ. ಬಂಧಿತರನ್ನು ಭಾಗ್ಯವಾನ್, ವಿಠಲ್, ಸಚಿನ್, ಸಾಯಿ ಕಾಂಬ್ಳೆ ಹಾಗೂ ಆದಿತ್ಯ ಕಾಂಬ್ಳೆ ಎಂದು ಗುರುತಿಸಲಾಗಿದೆ.