ಸಲ್ಮಾನ್ ಖಾನ್ ಮತ್ತು ಬಿಷ್ಣೋಯ್ ಗ್ಯಾಂಗ್ ನಡುವಿನ ವೈಷಮ್ಯಕ್ಕೆ ಪ್ರಮುಖ ಕಾರಣವೆಂದು ಹೇಳಲಾಗುವುದು 1998ರ ಕೃಷ್ಣಮೃಗ ಬೇಟೆ ಪ್ರಕರಣ. ರಾಜಸ್ಥಾನದ ಜೋಧ್‌ಪುರ ಸಮೀಪ ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಆರೋಪದ ಮೇಲೆ ಸಲ್ಮಾನ್ ಖಾನ್‌ಗೆ 5 ವರ್ಷ ಜೈಲು ಶಿಕ್ಷೆ ಆಗಿತ್ತು.