ವೈಯಕ್ತಿಕ ಜೀವನದ ಹಿನ್ನಡೆಯ ಬೆನ್ನಲ್ಲೇ ಟೀಮ್‌ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ರೆಡ್‌ಬಾಲ್‌ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಪರ ಟೆಸ್ಟ್ ಆಡುವ ಕನಸು ನನಸಾಗದಿದ್ದರೂ, ಮುಂಬರುವ ದಿನಗಳಲ್ಲಿ ವೈಟ್-ಬಾಲ್ ಕ್ರಿಕೆಟ್‌ಗೆ ಮರಳುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.