ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಭಾನುವಾರವೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಚಾಮರಾಜನಗರ, ಮೈಸೂರು, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಮುನ್ಸೂಚನೆ ಇದೆ.