ರಾಕಿಂಗ್ ಸ್ಟಾರ್ ಯಶ್ (Yash) ಮತ್ತು ರಾಧಿಕಾ ಪಂಡಿತ್ (Radhika Pandit) ದಂಪತಿಯ ಮಕ್ಕಳಾದ ಐರಾ ಮತ್ತು ಯಥರ್ವ್ ಅವರ ಪಾಲಿಗೆ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದಾ ವಿಶೇಷ ನೆನಪಾಗಿ ಉಳಿಯಲಿದೆ. ಏಕೆಂದರೆ, ಈ ಮಹಾಕಾವ್ಯ ಆಧಾರಿತ ಸಿನಿಮಾ ಅವರ ಜೀವನದ ಮೊದಲ ಚಿತ್ರ ವೀಕ್ಷಣೆಯ ಅನುಭವಕ್ಕೆ ಸಾಕ್ಷಿಯಾಗಿದೆ.