ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನಿಖೆ ವೇಳೆ ಮೊಬೈಲ್ ರಿಸೆಟ್ ಮಾಡಿ ಸಾಕ್ಷ್ಯ ನಾಶಪಡಿಸಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಿಸಿಬಿ ಪೊಲೀಸರು ನಟನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದು, ಮತ್ತೆ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ.