ಬೆಂಗಳೂರು: ಕರ್ನಾಟಕ ಪ್ರವೇಶಿಸಿದ ಬಳಿಕ ಆರಂಭದಲ್ಲೇ ಆರ್ಭಟಿಸಿದ್ದ ಹಿಂಗಾರು ಮಳೆಯು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿತ್ತು. ಇದೀಗ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಆಗಲಿದ್ದು, ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹಗುರ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.