ನ್ಯೂಜಿಲೆಂಡ್‌ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. 26 ಎಸೆತಗಳಲ್ಲಿ 51 ರನ್ ಸಿಡಿಸಿದ ತಿಲಕ್ ವರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಕೋಚ್ ಗೌತಮ್ ಗಂಭೀರ್ ಅವರ ಪ್ರೇರಣೆಯ ಮಾತುಗಳೇ ತಮ್ಮ ಈ ಸ್ಫೋಟಕ ಆಟಕ್ಕೆ ಕಾರಣ ಎಂದು ಅವರು ಬಹಿರಂಗಪಡಿಸಿದ್ದಾರೆ.