ನವದೆಹಲಿ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(CJP) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಶನಿವಾರ ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ರಾತ್ರೋರಾತ್ರಿ ಕನಿಷ್ಠ 1,000 ಜನರನ್ನು ವಶಕ್ಕೆ ಪಡೆದಿದ್ದಾರೆ.