ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಬಗ್ಗೆ ಅಗೌರವದ ಮಾತಾಡಿರುವ ಸಚಿವ ಮಧು ಬಂಗಾರಪ್ಪ (Madhu Bangarappa) ಕೂಡಲೇ ರಾಷ್ಟ್ರಪತಿಗಳ ಕ್ಷಮೆ ಕೇಳಬೇಕು ಅಂತ ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆಯನ್ನ ಜೆಡಿಎಸ್ ಖಂಡಿಸಿದೆ.