ಬೆಂಗಳೂರು: ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress High Command) ಮಧ್ಯಪ್ರವೇಶ ಮಾಡಬೇಕು ಅಂತ ಜೆಡಿಎಸ್ ಎಂಎಲ್‌ಸಿ ಭೋಜೇಗೌಡ (MLC Bhojegowda) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಸ್ಟಿಂಗ್ ಆಪರೇಷನ್‌ನಿಂದ (Sting Operation) ಕರ್ನಾಟಕದ ಮಾನ ಮರ್ಯಾದೆ ಹರಾಜಾಗಿದೆ. ಸರ್ಕಾರ ಇದರ ಹೊಣೆ ಹೊರಬೇಕು.