ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್(Gyanesh Kumar) ಅವರ ವಿರುದ್ಧ ಹೊಸದಾಗಿ ಮಹಾಭಿಯೋಗ (Impeachment) ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್(Congress) ಈ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದ್ದು ಇಂಡಿಯಾ (INDIA) ಮೈತ್ರಿಕೂಟದ ಪಕ್ಷಗಳ ನಡುವೆ ಈ ಕುರಿತು ಒಮ್ಮತ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.