ಮೈಸೂರು: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ಸ್ಟಾರ್ ರಜನಿಕಾಂತ್ (Superstar Rajanikanth) ಅವರಿಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಚಿತ್ರೀಕರಣ ಸಂಬಂಧ ಮೈಸೂರಿನಲ್ಲಿ ತಂಗಿರುವ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ.