ನವದೆಹಲಿ: ಭಾರತದ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ₹11,000 ಕೋಟಿ ಮೊತ್ತದ ಬೃಹತ್ ಯೋಜನೆಗೆ ಅನುಮೋದನೆ ನೀಡಿದೆ.