ಬೆಂಗಳೂರು: ಬರಗಾಲ ಹಿನ್ನೆಲೆಯಲ್ಲಿ ರಾಜ್ಯದ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ನೀರಿನ ಭವಣೆ ಉಂಟಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ಮನವಿ ಮೇರೆಗೆ ತೆಲಂಗಾಣ ಸರ್ಕಾರವು ಜುರಾಲ ಯೋಜನೆಯಿಂದ 3TMCFT ನೀರನ್ನು ಕರ್ನಾಟಕದ ಕೃಷ್ಣಾ ನದಿಗೆ ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದೆ.