ಮುಂಬೈನ ಜುಹು ಪ್ರದೇಶದಲ್ಲಿ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಅಪರಿಚಿತ ಬೈಕ್ ಸವಾರರು ದಿಢೀರ್ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಾಲಕ ಮತ್ತು ಅಭಿಮಾನಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.