ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವೆ 10 ಕೋಟಿ ರೂ. ಅಕ್ರಮ ನಗದು ವಹಿವಾಟು ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ಹಿಂದಿರುಗಿಸದ ಕಾರಣ ಇಬ್ಬರ ನಡುವೆ ಜಗಳವಾಗಿದ್ದು, ಐಟಿ ಮತ್ತು ಇಡಿಗೆ ದೂರು ನೀಡಲಾಗಿದೆ. ಜೊತೆಗೆ ಸಚಿವ ಜಮೀರ್ ಅಹ್ಮದ್ ನಿಂದನೆ ಪ್ರಕರಣದಲ್ಲಿ ಧನ್ವೀರ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.