ಹಾಸನ: ಅರಕಲಗೂಡು (Arkalagud) ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ದೆಯ ಶವ ಪತ್ತೆಯಾಗಿದೆ. ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಮೃತಪಟ್ಟಿರುವ ಮಹಿಳೆ. ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿ ಚೀಲದಲ್ಲಿ ತುಂಬಿ ನಾಲೆಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.