ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ (Dharmasthala Soujanya Case) ಮರು ತನಿಖೆಗೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್‌ಐಟಿ (SIT) ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಅಲ್ಲದೇ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.