– ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಬೈಕ್‌ – ಸುಟ್ಟು ಹೋದ ಸವಾರ ಚಿಕ್ಕಮಗಳೂರು: KSRTC ಬಸ್‌ ಹಾಗೂ ಬೈಕ್‌ (Bike) ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವನ್ನಪ್ಪಿದ ಘಟನೆ ಶೃಂಗೇರಿ (Sringeri) ತಾಲೂಕಿನ ಮೆಣಸೆ ಬಳಿ ನಡೆದಿದೆ. ಶೃಂಗೇರಿ ತಾಲೂಕಿನ ಕುಂಚೇಬೈಲು ನಿವಾಸಿ ನಾಗರಾಜ್ (32) ಮೃತ ದುರ್ದೈವಿ.