ಬೆಂಗಳೂರಿನಲ್ಲೂ ನ್ಯೂಯಾರ್ಕ್ ಮತ್ತು ಲಂಡನ್ ಮಾದರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ನಿರ್ಬಂಧ ವಿಧಿಸುವ ಚಿಂತನೆ ನಡೆದಿದೆ. ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕ್ಲಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡದಿರುವ ಕುರಿತು ತಜ್ಞರ ಸಮಿತಿ ಪ್ರಸ್ತಾವನೆ ಸಲ್ಲಿಸಿದೆ.