ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಏಕದಿನ ಸರಣಿ ಶುರುವಾದ ಬೆನ್ನಲ್ಲೇ, ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಭಾರತೀಯ ಕ್ರಿಕೆಟ್ ತಾರೆಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರು ವಿಶೇಷ ವ್ಯಕ್ತಿಯೊಬ್ಬರಿಂದ ಬ್ಲ್ಯಾಕ್ ಜೆರ್ಸಿ ಪಡೆಯುತ್ತಿರುವ ಚಿತ್ರ ಕ್ರೀಡಾಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದೆ.