ವಿಶ್ವದ ಅತ್ಯಂತ ಜನಪ್ರಿಯ ಟಿ20 ಲೀಗ್‌ ಆದ ಐಪಿಎಲ್ ಹರಾಜು ಪ್ರಕ್ರಿಯೆಗಾಗಿ ಇಡೀ ಕ್ರಿಕೆಟ್ ಲೋಕವೇ ಕಾತರದಿಂದ ಕಾಯುತ್ತಿದೆ. ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಬಿಗ್ ಟ್ರೇಡ್ ಡೀಲ್ ನಡೆಯುವ ಸಾಧ್ಯತೆಯಿದೆ. ಈ ಸ್ವಾಪ್ ಡೀಲ್ ಮೂಲಕ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ಪಾಲಾಗಲಿದ್ದಾರೆ ಎಂದು ವರದಿಯಾಗಿದೆ.