ಚನ್ನಗಿರಿ: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತದೆ. 5 ಗ್ಯಾರಂಟಿ ಯೋಜನೆಗಳನ್ನು ಮಾತ್ರ ನೀಡದೇ ಅಭಿವೃದ್ಧಿ ಕಾರ್ಯಗಳಿಗೂ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಬದ್ಧನಾಗಿದ್ದೇನೆ’ ಎಂದು ಶಾಸಕ ಬಸವರಾಜು ಶಿವಗಂಗಾ ತಿಳಿಸಿದರು.