ಬಸವನಬಾಗೇವಾಡಿ: ತಾಲ್ಲೂಕಿನ ಬಸವನಬಾಗೇವಾಡಿ–ನಿಡಗುಂದಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಪರಶುರಾಮ ಯಮನಪ್ಪ ಮಾದರ (37) ಹಾಗೂ ಕರಿಹಳ್ಳ ತಾಂಡಾದ ಕುಮಾರ ರಾಮು ರಾಠೋಡ (24) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.