ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ. ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.