ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ನಿವಾಸದಲ್ಲಿ ಮಾಡಿದ್ದ ಕಾಳಿ ಪೂಜೆ ಇದೀಗ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಳಿ ದೇವಿಯ ಪೂಜಾ ವಿಧಿವಿಧಾನಗಳನ್ನ ನೆರವೇರಿಸುವಾಗ, ಮಮತಾ ಬ್ಯಾನರ್ಜಿ ಅವರು ದೇವರಿಗೆ ಹೂವುಗಳನ್ನ ಎಸೆದಿದ್ದಾರೆ ಎನ್ನಲಾದ ವಿಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.