ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 19.1 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಕೇವಲ 2 ವಿಕೆಟ್ ಕಳೆದುಕೊಂಡು 14.4 ಓವರ್‌ಗಳಲ್ಲಿ 172 ರನ್ ಗಳಿಸಿ ಸುಲಭ ಜಯ ದಾಖಲಿಸಿತು.