ಬರದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರವು ಗರಿಷ್ಠ ₹2,500 ಮಧ್ಯಂತರ ಪರಿಹಾರ ಘೋಷಿಸಿದ್ದು, ಸೋಮವಾರದಿಂದ ಹಣ ಬಿಡುಗಡೆಯಾಗಲಿದೆ. ಕೇಂದ್ರದ ಎನ್‌ಡಿಆರ್‌ಎಫ್‌ ಅನುದಾನ ಬಂದ ನಂತರ ಉಳಿದ ಪರಿಹಾರ ವಿತರಿಸಲಾಗುವುದು ಎಂದು ಡಾ.ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.