ಬೆಂಗಳೂರು: ಈ ವರ್ಷ ಭಾನುವಾರ ಆದ್ರೂ ಸಹ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಕಡ್ಡಾಯ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ವರ್ಷ ನವೆಂಬರ್‌ 1 ಕನ್ನಡ ರಾಜ್ಯೋತ್ಸವ ಭಾನುವಾರದ (Sunday) ದಿನ ಇರುವ ಹಿನ್ನೆಲೆ ಕಡ್ಡಾಯವಾಗಿ ಆಚರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.