ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರಿಗೆ ಎದೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ತಂಡ ನಿರಂತರವಾಗಿ ನಿಗಾ ವಹಿಸಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.